ದ.ಕ. ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಸ್ಪರ್ಧೆ: ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

Prasthutha|

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತವಾದ ಬೆನ್ನಲ್ಲೇ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತಿಲ ಪರಿವಾರ ಎಂಬುದು ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ ಎಂದು ಕಟೀಲ್ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಕುಮಾರ್ ಪುತ್ತಿಲ ಅವರನ್ನು ಮನವೊಲಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವು ಬಹಳ ವರ್ಷಗಳ ಹೋರಾಟದಿಂದ ಈ ಮಟ್ಟಕ್ಕೆ ಬೆಳೆದಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನ್ನು ಎದುರಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಪಕ್ಷಕ್ಕೆ ಎದುರಾಳಿ ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.


ರಾಮಮಂದಿರ ನಿರ್ಮಾಣವಾದ ಬಳಿಕ ಬಿಜೆಪಿ ಪರವಾದ ವಾತಾವರಣ ಅದ್ಭುತವಾಗಿದೆ. ಹಿಂದುತ್ವ,ರಾಷ್ಟ್ರವಾದ,ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಸಮಸ್ಯೆ ಬೇರೆ, ಈಗಿನ ವಿಚಾರ ಬೇರೆ. ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುತ್ತೇನೆ. ಟಿಕೆಟ್ ಕೊಡುವುದು ಅಥವಾ ಬಿಡುವುದು ರಾಷ್ಟ್ರೀಯ ನಾಯಕರ ತೀರ್ಮಾನ ಎಂದರು.



Join Whatsapp