ಅರುಣಾಚಲ ಪ್ರದೇಶ: ಸತತ ಮೂರನೇ ಬಾರಿಗೆ ಅಧಿಕಾರಕೇರಿದ ಬಿಜೆಪಿ

Prasthutha|

ಅರುಣಾಚಲ ಪ್ರದೇಶ: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಿದೆ. 60 ಸದಸ್ಯ ಬಲದಲ್ಲಿ 41 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತವನ್ನು ಪಡೆದುಕೊಂಡು ಅರುಣಾಚಲ ಪ್ರದೇಶದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ.

- Advertisement -

ಏಪ್ರಿಲ್ 19 ರಂದು ಈಶಾನ್ಯ ರಾಜ್ಯದಲ್ಲಿ ಚುನಾವಣೆ ನಡೆದ 50 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. ಉಳಿದ 10 ಸ್ಥಾನಗಳನ್ನು ಕೇಸರಿ ಪಕ್ಷ ಅವಿರೋಧವಾಗಿ ಗೆದ್ದಿದೆ. 50 ಸ್ಥಾನಗಳ ಪೈಕಿ ಬಿಜೆಪಿ 31ರಲ್ಲಿ ಗೆದ್ದು ನಾಲ್ಕರಲ್ಲಿ ಮುನ್ನಡೆ ಸಾಧಿಸಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿರೆ, ಅರುಣಾಚಲದ ಪೀಪಲ್ಸ್ ಪಾರ್ಟಿ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ.

ಅವಿರೋಧವಾಗಿ ಗೆದ್ದ 10 ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ಪೆಮಾ ಖಂಡು ಕೂಡ ಒಬ್ಬರು.



Join Whatsapp