ಅರುಣಾಚಲ ಪ್ರದೇಶ: ಭಾರಿ ಮುನ್ನಡೆಯತ್ತ ಬಿಜೆಪಿ

Prasthutha|

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆಯತ್ತ ಸಾಗಿದೆ. ಈಗಾಗಲೇ 10 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿರುವ ಬಿಜೆಪಿ, ಉಳಿದ 50 ಕ್ಷೇತ್ರಗಳ ಪೈಕಿ 34ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಳಿದಂತೆ ಎನ್‌ಪಿಇಪಿ 6ರಲ್ಲಿ ಹಾಗೂ ಇತರ ಪಕ್ಷಗಳು 8 ಕಡೆ ಮುನ್ನಡೆಯಲ್ಲಿವೆ.

- Advertisement -

ಸಿಕ್ಕಿಂನಲ್ಲಿ ಆಡಳಿತಾರೂಢ ಎಸ್‌ಕೆಎಂ ಭಾರಿ ಬಹುಮತ ಸಾಧಿಸುವ ಲಕ್ಷಣಗಳು ಕಂಡುಬಂದಿವೆ. ಇಲ್ಲಿನ 32 ವಿಧಾನಸಭಾ ಸ್ಥಾನಗಳ ಪೈಕಿ 31ರಲ್ಲಿ ಮುನ್ನಡೆ ಸಾಧಿಸಿದೆ. ಪ್ರಮುಖ ವಿರೋಧ ಪಕ್ಷ ಎಸ್‌ಡಿಎಫ್‌ ಒಂದು ಕಡೆಯಷ್ಟೇ ಮುನ್ನಡೆಯಲ್ಲಿದೆ.

2019ರ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದು ಪೆಮಾ ಖಂಡು ಮತ್ತೊಮ್ಮೆ ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್ ಕೇವಲ 4 ಸ್ಥಾನಗಳನ್ನು ಗೆದ್ದಿತ್ತು. 2014ರ ಅರುಣಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ 42 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ ಕೇವಲ 11 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.



Join Whatsapp