ಎಂಸಿಡಿ ಚುನಾವಣೆಯಲ್ಲಿ ಎಎಪಿ ಗೆದ್ದರೆ ದೆಹಲಿ ಸ್ವಚ್ಛಗೊಳಿಸುವುದಾಗಿ ಘೋಷಿಸಿದ ಅರವಿಂದ್ ಕೇಜ್ರಿವಾಲ್

Prasthutha|

ನವದೆಹಲಿ: ಮುಂಬರುವ ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ) ಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ರಾಷ್ಟ್ರ ರಾಜಧಾನಿಯನ್ನು ಸ್ವಚ್ಛಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

- Advertisement -

ಗುರುವಾರ  ಗಾಜಿಪುರದ ಹೂಳು ತುಂಬುವ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮುಂಬರುವ ಎಂಸಿಡಿ ಚುನಾವಣೆಯಲ್ಲಿ ಕಸದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಡಲಾಗುವುದು ಎಂದು ಹೇಳಿದರು.

“ಈ ಕಸದ ಗುಡ್ಡೆಯ ರಕ್ಷಣೆಗೆ ಅವರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಎಲ್ಲಾ ದುಷ್ಟ ಶಕ್ತಿಗಳು ನಮ್ಮ (ಎಎಪಿ) ವಿರುದ್ಧ ಪಿತೂರಿ ನಡೆಸಿವೆ. ಅವರು ಎಂಸಿಡಿ ಚುನಾವಣೆಯನ್ನು ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡಿದರು. ಅವರಿಗೆ ಹೆಚ್ಚು ಸ್ಥಾನ ಸಿಗುತ್ತದೆ ಎಂಬ ಭರವಸೆಯಿಂದ ವಾರ್ಡ್‌ಗಳನ್ನು ವಿಂಗಡಣೆ ಮಾಡಿದರು. ಅಲ್ಲದೆ,  ಬಿಜೆಪಿ ತಮ್ಮ 15 ವರ್ಷಗಳ ಮಹಾನಗರ ಪಾಲಿಕೆಗಳ ಆಡಳಿತದಲ್ಲಿ 2 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ ಎಂದು ಆರೋಪಿಸಿರುವ ಕೇಜ್ರಿವಾಲ್, ಬಿಜೆಪಿಗೆ ಮತ ಹಾಕಬೇಡಿ ಎಂದು ಮನವಿ ಮಾಡಿದ್ದಾರೆ.

- Advertisement -

ಈ ವೇಳೆ ನೂರಾರು ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸಿ ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಯಾಗಿ, ಆಮ್ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಕೇಸರಿ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.



Join Whatsapp