3ನೇ ಬಾರಿಯೂ ವಿಚಾರಣೆಗೆ ಅರವಿಂದ ಕೇಜ್ರಿವಾಲ್‌ ಗೈರು

Prasthutha|

ನವದೆಹಲಿ: ಜಾರಿ ನಿರ್ದೇಶನಾಲಯವು (ಇ.ಡಿ) ಮೂರನೇ ಬಾರಿ ಸಮನ್ಸ್‌ ಜಾರಿಗೊಳಿಸಿದ್ದರೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಇಂದು ವಿಚಾರಣೆಗೆ ಹಾಜರಾಗುವಂತೆ ಹಾಜರಾಗಲಿಲ್ಲ. ಅಲ್ಲದೆ,ತನಿಖೆಗೆ ಸಂಬಂಧಿಸಿದ ಪ್ರಶ್ನಾವಳಿಯನ್ನು ಕಳುಹಿಸಿಕೊಡುವಂತೆ ಕೋರಿ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದಾರೆ.

- Advertisement -

ರಾಜ್ಯಸಭೆಯ ಚುನಾವಣೆ ಹಾಗೂ ಗಣರಾಜ್ಯೋತ್ಸವದ ಸಿದ್ಧತೆಯಲ್ಲಿ ಕಾರ್ಯನಿರತನಾಗಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಸ್ಪಷ್ಟತೆ ಸಿಗದಾಗಿದೆ. ಪ್ರಶ್ನಾವಳಿಯನ್ನು ಕಳುಹಿಸಿದರೆ ಉತ್ತರಿಸುವೆ ಎಂದು ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಜತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.3ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಇ.ಡಿ ಸಮನ್ಸ್ ನೀಡಿತ್ತು. ಈ ಹಿಂದೆಯೂ 2023ರ ನ.2 ಮತ್ತು ಡಿ.21ರಂದು ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಲಾಗಿತ್ತು. ಮೂರು ಬಾರಿಯೂ ಕೇಜ್ರಿವಾಲ್‌ ಹಾಜರಾಗಿಲ್ಲ.

- Advertisement -

‘ಲೋಕಸಭಾ ಚುನಾವಣೆಯಲ್ಲಿ ಕೇಜ್ರಿವಾಲ್‌ ಅವರು ಪ್ರಚಾರ ಮಾಡದಂತೆ ತಡೆಯಲು ಪದೇ ಪದೇ ಸಮನ್ಸ್‌ ನೀಡಲಾಗುತ್ತಿದೆ. ಕೇಜ್ರಿವಾಲ್‌ ಅವರನ್ನು ಬಂಧಿಸಲು ಪಿತೂರಿ ನಡೆದಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

Join Whatsapp