ಚಂಡೀಘಡ: ಪಂಜಾಬ್ ನಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಜಯಗಳಿಸಿದಲ್ಲಿ ಹದಿನೆಂಟು ವರ್ಷಕ್ಕಿಂತ ಮೇಲ್ಪಟ್ಟ ಪ್ರತಿ ಮಹಿಳೆಗೆ ಮಾಸಿಕ ಒಂದು ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಭರವಸೆ ನೀಡಿದ್ದಾರೆ.
ಸೋಮವಾರ ಪಂಜಾಬ್ ನ ಮೋಗಾದಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, ನಾವು 2022 ರಲ್ಲಿ ಪಂಜಾಬ್ ನಲ್ಲಿ ಅಧಿಕಾರಕ್ಕೆ ಬಂದರೆ ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೂ ಮಾಸಿಕ ಸಾವಿರ ರೂಪಾಯಿ ವಿತರಿಸುವುದಾಗಿ ತಿಳಿಸಿದರು. ಮಾತ್ರವಲ್ಲ ಒಂದು ಕುಟುಂಬದ ಮೂವರು ಮಹಿಳೆಯರಿಗೆ ಮಾಸಿಕ ತಲಾ 1000 ರೂಪಾಯಿ ನೀಡುವುದಾಗಿ ಭರವಸೆ ನೀಡಿದರು.
ಇದೊಂದು ಬೃಹತ್ ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಣ್ಣಿಸಿದ್ದಾರೆ.