ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

Prasthutha|

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅವರಿಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಜ್ರಿವಾಲ್‌ ಗೆ ದೆಹಲಿ ಸಚಿವರು ಸಾಥ್ ನೀಡಿದ್ದಾರೆ.

ಇದೇ ವೇಳೆ ಹೊಸ ಸರ್ಕಾರ ರಚನೆಗೆ ಅತಿಶಿ ಹಕ್ಕು ಮಂಡಿಸಿದರು. ಸೆ. 15 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.



Join Whatsapp
Exit mobile version