Home ಜಾಲತಾಣದಿಂದ ದೆಹಲಿ ಅಬಕಾರಿ ನೀತಿ ಪ್ರಕರಣ| ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್

ದೆಹಲಿ ಅಬಕಾರಿ ನೀತಿ ಪ್ರಕರಣ| ಅರವಿಂದ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ ಸಿಬಿಐ (CBI) ಶುಕ್ರವಾರ ಸಮನ್ಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಭಾನುವಾರದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್​ಗೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ಹೇಳಿವೆ. ಸದ್ಯ ಮನೀಶ್ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಏಪ್ರಿಲ್ 17ರ ವರೆಗೆ ಅವರು ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ.

ಕೇಜ್ರಿವಾಲ್ ಸರ್ಕಾರ ಭಾರೀ ವಂಚನೆ ಎಸಗಿದೆ ಎಂದು ಸಿಬಿಐ ಆರೋಪಿಸಿದೆ. ಸಂಸ್ಥೆಯೊಂದರ ಪರವಾಗಿ ಅಬಕಾರಿ ನೀತಿ ರೂಪಿಸಲು ಲಂಚ ಪಡೆಯಲಾಗಿತ್ತು ಎಂದೂ ಸಿಬಿಐ ಆಪಾದಿಸಿದೆ. ಆದರೆ, ಎಎಪಿಯು ಈ ಆರೋಪಗಳನ್ನು ತಳ್ಳಿಹಾಕಿದ್ದು, ಇದು ರಾಜಕೀಯ ಸೇಡಿನಿಂದ ಕೂಡಿದ ಕ್ರಮ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕೇಜ್ರಿವಾಲ್ ಅವರೇ ಹಗರಣದ ಮಾಸ್ಟರ್ ಮೈಂಡ್ ಎಂದು ಬಿಜೆಪಿ ಹಲವು ಬಾರಿ ಪ್ರತಿಪಾದಿಸಿದೆ. ಆದರೆ, ಈ ಆರೋಪಗಳನ್ನು ಕೇಜ್ರಿವಾಲ್ ಅಲ್ಲಗಳೆದಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಸಿಬಿಐಯು ಕೇಜ್ರಿವಾಲ್​ಗೆ ಇದೇ ಮೊದಲ ಬಾರಿಗೆ ಸಮನ್ಸ್ ನೀಡಿದೆ.

Join Whatsapp
Exit mobile version