Home ಟಾಪ್ ಸುದ್ದಿಗಳು ಜೈಲಿನಿಂದಲೇ ಅರವಿಂದ ಕೇಜ್ರಿವಾಲ್ ಸರ್ಕಾರ ನಡೆಸಲಿದ್ದಾರೆ: ಸಚಿವೆ ಅತಿಶಿ

ಜೈಲಿನಿಂದಲೇ ಅರವಿಂದ ಕೇಜ್ರಿವಾಲ್ ಸರ್ಕಾರ ನಡೆಸಲಿದ್ದಾರೆ: ಸಚಿವೆ ಅತಿಶಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.


‘ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅಗತ್ಯ ಬಿದ್ದರೆ ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ. ಪ್ರಕರಣದಲ್ಲಿ ಅವರು ದೋಷಿ ಎಂದು ಸಾಬೀತಾಗಿಲ್ಲ. ಜೈಲಿನಿಂದ ಸರ್ಕಾರ ನಡೆಸಕೂಡದು ಎಂದು ನಿರ್ಬಂಧಿಸುವ ಯಾವುದೇ ಕಾನೂನುಗಳು ಇಲ್ಲ. ಹೀಗಾಗಿ ಅವರು ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ’ ಎಂದು ಹೇಳಿದ್ದಾರೆ.

Join Whatsapp
Exit mobile version