Home ಟಾಪ್ ಸುದ್ದಿಗಳು ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ್ ಕೇಜ್ರಿವಾಲ್

ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ್ ಕೇಜ್ರಿವಾಲ್

ನವದೆಹಲಿ: ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ.


ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅವರನ್ನು ಗುರುವಾರ ಬಂಧಿಸಿತ್ತು. ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಕೇಜ್ರಿವಾಲ್ ಕುಟುಂಬವನ್ನು ಗೃಹಬಂಧನದಲ್ಲಿರಿಸಲಾಗಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.


ಪ್ರೋಟೋಕಾಲ್ ಗಳಿಗೆ ಅನುಗುಣವಾಗಿ ಈಗ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Join Whatsapp
Exit mobile version