ದೆಹಲಿ: ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಜಾರಿಮಾಡಲಾಗಿದೆ. ಪ್ರತಿಭಟನಾ ನಿರತ ಸಚಿವರಾದ ಸೌರಭ್ ಭಾರದ್ವಾಜ್, ಅತಿಶಿ ಸೇರಿದಂತೆ ಹಲವು ಆಪ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.