ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್ 27ರವರೆಗೆ ವಿಸ್ತರಣೆ

Prasthutha|

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 27ರವರೆಗೆ ವಿಸ್ತರಿಸಿದೆ.

- Advertisement -


ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.


ಇದಕ್ಕೂ ಮೊದಲು ಆಗಸ್ಟ್ 14ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು.



Join Whatsapp