ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

Prasthutha|

ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದಾರೆ. ಎಎಪಿ ಜೊತೆಗೆ ರಾಜ್ಯದಲ್ಲಿ ಮೈತ್ರಿಯಿಂದ ಅಸಮಾಧಾನಗೊಂಡು ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

- Advertisement -

ದಿವಂಗತ ಶೀಲಾ ದೀಕ್ಷಿತ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಚಿವರೂ ಆಗಿದ್ದ ಅರವಿಂದರ್ ಸಿಂಗ್ ಲವ್ಲಿ ಅವರನ್ನು ಆಗಸ್ಟ್ 31, 2023ರಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಲಾಗಿತ್ತು.

ಅರವಿಂದರ್ ಸಿಂಗ್ ಲವ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ದೆಹಲಿ ಕಾಂಗ್ರೆಸ್‌ ಘಟಕವು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದೊಂದಿಗಿನ(ಎಎಪಿ) ಮೈತ್ರಿಗೆ ವಿರುದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ.

- Advertisement -

ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದಿಲ್ಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿತ್ತು. ಅದರೂ  ಪಕ್ಷವು ದಿಲ್ಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿದೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

Join Whatsapp