ಮುಂಬೈ: ಡ್ರಗ್ಸ್ ಪಾರ್ಟಿ ಮಾಡಿ ಎನ್ ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಬಾಲಿವುಡ್ ನ ಅನೇಕ ಸೆಲೆಬ್ರಿಟಿಗಳು ಬೆಂಬಲ ಸೂಚಿಸಿದ್ದಾರೆ. ಈ ನಡುವೆ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಿಶಾಲ್ ದದ್ಲಾನಿ ಅವರು, ಆರ್ಯನ್ ಖಾನ್ ಬಂಧನ ಒಂದು ಸಂಚು ಎಂದು ಅವರು ಆರೋಪಿಸಿದ್ದಾರೆ.
ಅದಾನಿ ಬಂದರಿನಲ್ಲಿ ಸಿಕ್ಕ 3 ಸಾವಿರ ಕೆಜಿ ಡ್ರಗ್ಸ್ ಮತ್ತು ಬಿಜೆಪಿ ಶಾಸಕನ ಮಗ ಮಾಡಿದ ರೈತರ ಕೊಲೆ ಪ್ರಕರಣವನ್ನು ಮರೆಮಾಚಲು ಶಾರುಖ್ ಖಾನ್ ಮತ್ತು ಅವರ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ’ ಎಂದು ವಿಶಾಲ್ ದದ್ಲಾನಿ ನೇರವಾಗಿ ಆರೋಪ ಮಾಡಿದ್ದಾರೆ. ‘ಕಳೆದ 30 ವರ್ಷದಲ್ಲಿ ಶಾರುಖ್ ಖಾನ್ ಜೊತೆ ಕೆಲಸ ಮಾಡಿದವರಲ್ಲಿ ಎಷ್ಟು ಜನರು ಈಗ ಅವರ ಪರವಾಗಿ ಇದ್ದೀರಿ’ ಎಂದು ಕೂಡ ಅವರು ಪ್ರಶ್ನಿಸಿದ್ದಾರೆ.