ಶಿವಮೊಗ್ಗ: ನಾನು ಜಗಜ್ಯೋತಿ ಬಸವಣ್ಣನವರ ಅನುಯಾಯಿ ಆಗಿ ಕ್ಷೇತ್ರದಲ್ಲಿ ಮತ ಕೇಳುತ್ತೇನೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡ್ತೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ತಂದೆ ಮಕ್ಕಳ ಕೈಗೆ ಪಕ್ಷ ಸಿಕ್ಕಿದೆ, ಕಾರ್ಯಕರ್ತರು ಪರದಾಡ್ತಿದ್ದಾರೆ. ಪಕ್ಷ ಉಳಿಸಲು ನನ್ನ ಈ ಹೋರಾಟ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಯತ್ನಾಳ್, ಒಕ್ಕಲಿಗರಾದ ಸಿ.ಟಿ.ರವಿ, ಹಿಂದುಳಿದ ನನಗೆ ಯಾಕೆ ಕೊಟ್ಟಿಲ್ಲ. ಪಕ್ಷ ಸಂಘಟನೆ ದೃಷ್ಟಿಯಿಂದ ಇವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕಿತ್ತು. ಅದು ಬಿಟ್ಟು ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರು. ನಾನು ಹಿಂದುತ್ವದ ವಿಚಾರದ ಮೇಲೆ ಚುನಾವಣೆ ಮಾಡುತ್ತೇನೆ ಎಂದರು.