ಒಂದನೇ ತರಗತಿಗೆ ದಾಖಲಾತಿ ಪಡೆಯಲು 6 ವರ್ಷ ಪೂರ್ತಿಯಾಗಬೇಕೆಂಬ ನಿಯಮ ಸದ್ಯಕ್ಕಿಲ್ಲ: ಬಿ.ಸಿ.ನಾಗೇಶ್

Prasthutha|

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷಗಳು ಪೂರ್ಣಗೊಂಡಿರಬೇಕೆಂಬ ನಿಯಮವನ್ನು ಸದ್ಯಕ್ಕೆ ಜಾರಿಗೊಳಿಸುವುದಿಲ್ಲ. ಈ ನಿಯಮವನ್ನು 2025–26ರಿಂದ ಜಾರಿಗೊಳಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

- Advertisement -

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಒಂದನೇ ತರಗತಿಗೆ ಮಗು ಪ್ರವೇಶ ಪಡೆಯಲು 6 ವರ್ಷಗಳು ಪೂರ್ಣಗೊಂಡಿರುವುದು ಕಡ್ಡಾಯ. ಶಿಕ್ಷಣ ತಜ್ಞರ ಸಲಹೆಯೂ ಅದೇ ಆಗಿದೆ. 23 ರಾಜ್ಯಗಳು ಈಗಾಗಲೇ ಈ ನಿಯಮ ಅಳವಡಿಸಿಕೊಂಡಿವೆ. ರಾಜ್ಯದಲ್ಲೂ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಅಳವಡಿಸಿಕೊಳ್ಳಲಾಗುವುದು. ಆ ಮಕ್ಕಳು ಎರಡು ವರ್ಷಗಳ ನಂತರ (2025–26) ಒಂದನೇ ತರಗತಿಗೆ ಪ್ರವೇಶ ಪಡೆಯಲು ಅನುಕೂಲವಾಗುತ್ತದೆ ಎಂದರು.

ಕೋವಿಡ್ ನಂತರದ ದಿನಗಳಲ್ಲಿ ಬಹಳಷ್ಟು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಅವರ ಕಲಿಕಾ ಮಟ್ಟ ಮೌಲ್ಯಮಾಪನ ಮಾಡಲು, ಕಲಿಕೆಯ ಸಾಮರ್ಥ್ಯ ವೃದ್ಧಿಸಲು 5 ಮತ್ತು 8ನೇ ತರಗತಿಗಳಿಗೆ ಸಾಮಾನ್ಯ ಪರೀಕ್ಷೆ ನಡೆಸುವ ಚಿಂತನೆ ಇದೆ ಎಂದು ತಿಳಿಸಿದರು.

Join Whatsapp