ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ಪಿ. ಬಿ. ವರಾಳೆ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಹೈಕೋರ್ಟ್ ನ್ಯಾಯಮೂರ್ತಿಗಳು, ನ್ಯಾಯಾಂಗದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.