ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಬಿಆರ್ಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬಿಆರ್ಎಸ್ ಪಕ್ಷ ಪೋಸ್ಟ್ ಮಾಡಿದೆ. ತೆಲಂಗಾಣ ಭವನದಲ್ಲಿ ನಡೆದ ಸಭೆಯಲ್ಲಿ ಹೊಸದಾಗಿ ಚುನಾಯಿರಾಗಿರುವ ಪಕ್ಷದ ಶಾಸಕರ ಸರ್ವಾನುಮತದಿಂದ ಕೆ. ಚಂದ್ರಶೇಖರ್ ರಾವ್(ಕೆಸಿಆರ್) ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಬಿಆರ್ಎಸ್ ಪಕ್ಷ ಶನಿವಾರ ತಿಳಿಸಿದೆ.