ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಆರ್. ಅಶೋಕ್ ಆಯ್ಕೆಯಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನ ಐಟಿಸಿ ಗಾರ್ಡೆನಿಯಾ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಮಲ್ಲೇಶ್ವರ ಶಾಸಕ ಅಶ್ವತ್ಥ ನಾರಾಯಣ, ಪದ್ಮನಾಭ ನಗರ ಶಾಸಕ ಆರ್ ಅಶೋಕ್, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ರೇಸ್‌ನಲ್ಲಿ ಇದ್ದರು, ಆದರೆ ಕೊನೆಗೆ ಆರ್ ಅಶೋಕ್ ಫೈನಲ್ ಆಗಿದ್ದು, ಯತ್ನಾಲ್ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಶಾಸಕಾಂಗ ಸಭೆಯಿಂದ ಹೊರನಡೆದಿದ್ದಾರೆ.