Home ಟಾಪ್ ಸುದ್ದಿಗಳು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ್ ಆಯ್ಕೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ್ ಆಯ್ಕೆ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಆರ್. ಅಶೋಕ್ ಆಯ್ಕೆಯಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನ ಐಟಿಸಿ ಗಾರ್ಡೆನಿಯಾ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ಕಾರ್ಕಳ ಶಾಸಕ ವಿ ಸುನೀಲ್​ ಕುಮಾರ್​, ಮಲ್ಲೇಶ್ವರ ಶಾಸಕ ಅಶ್ವತ್ಥ ನಾರಾಯಣ, ಪದ್ಮನಾಭ ನಗರ ಶಾಸಕ ಆರ್​ ಅಶೋಕ್​, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ರೇಸ್‌ನಲ್ಲಿ ಇದ್ದರು, ಆದರೆ ಕೊನೆಗೆ ಆರ್ ಅಶೋಕ್ ಫೈನಲ್ ಆಗಿದ್ದು, ಯತ್ನಾಲ್ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಶಾಸಕಾಂಗ ಸಭೆಯಿಂದ ಹೊರನಡೆದಿದ್ದಾರೆ.

Join Whatsapp
Exit mobile version