ತಮಿಳುನಾಡಿನಲ್ಲಿ ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಅಸಾದುದ್ದೀನ್

Prasthutha|

ಹೈದರಾಬಾದ್: ಲೋಕಸಭಾ ಚುನಾವಣೆಯನ್ನು ಎದುರಿಸುವ ಈ ಸಂದರ್ಭ ತಮಿಳುನಾಡಿನಲ್ಲಿ ಎಐಎಡಿಎಂಕೆಗೆ ಬೆಂಬಲ ನೀಡುತ್ತೇವೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಘೋಷಿಸಿದ್ದಾರೆ.

- Advertisement -

‘ಎಕ್ಸ್‌’ನಲ್ಲಿ ಈ ಬಗ್ಗೆ ಪ್ರಕಟಿಸಿದ ಅವರು, ಈ ಮೈತ್ರಿಯು ವಿಧಾನಸಭಾ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರಾಕರಿಸಿದೆಯಲ್ಲದೆ, ಭವಿಷ್ಯದಲ್ಲಿ ಎಂದಿಗೂ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಶಂಸಿದ ಉವೈಸಿ, ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವುದಾಗಿಯೂ ಅದು ಭರವಸೆ ನೀಡಿದೆ ಎಂದಿದ್ದಾರೆ. ಆದ್ದರಿಂದ, ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.



Join Whatsapp