Home ಟಾಪ್ ಸುದ್ದಿಗಳು ಗುಂಡಿನ ದಾಳಿ: AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ಗೆ ‘ಝಡ್ ಪ್ಲಸ್’ ಭದ್ರತೆ

ಗುಂಡಿನ ದಾಳಿ: AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ಗೆ ‘ಝಡ್ ಪ್ಲಸ್’ ಭದ್ರತೆ

ಲಕ್ನೋ: AIMIM ಮುಖ್ಯಸ್ಥ, ಸಂಸದ ಅಸದುದ್ದೀನ್ ಉವೈಸಿ ಕಾರಿನ ಮೇಲೆ ನಡೆದ ಗುಂಡಿನ ದಾಳಿಯ ಬಳಿಕ ಭಾರತ ಸರ್ಕಾರ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ CRPF ನಿಂದ ಝಡ್ ಪ್ಲಸ್ ಭದ್ರತೆಯನ್ನು ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಸಂಸದ ಅಸದುದ್ದೀನ್ ಉವೈಸಿ ಅವರ ಕಾರಿನ ಮೇಲೆ ಗುಂಡು ಹಾರಾಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಲಾದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.

ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅಸದುದ್ದೀನ್ ಉವೈಸಿ ಅವರ ಹೇಳಿಕೆಯಿಂದ ಬೇಸತ್ತು ಈ ದುಷ್ಕೃತ್ಯ ಎಸೆದಿರುವುದಾಗಿ ಆರೋಪಿಗಳು ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದೆಂದು ಉತ್ತರ ಪ್ರದೇಶ ಎಡಿಜಿ ಪ್ರಶಾಂತಿ ಕುಮಾರ್ ತಿಳಿಸಿದ್ದಾರೆ.

Join Whatsapp
Exit mobile version