ಹೈದರಾಬಾದ್: ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ರಾಜ್ಯ ಸರ್ಕಾರ ಪ್ರಾಯೋಜಿತ ಹಿಂಸೆ ಎಂದು ಎ.ಐ.ಎಂ.ಐ.ಎಂ ಮುಖ್ಯಸ್ಥ, ಸಂಸದ ಅಸದುದ್ದೀನ್ ಉವೈಸಿ ಹೇಳಿದ್ದಾರೆ.
ಮಾತ್ರವಲ್ಲ ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿಪಡೆದ ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸರ್ಕಾರದ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಉದ್ರೇಕಕಾರಿಯಾಗಿ ಹೇಳಿಕೆ ನೀಡಿದ ಗೃಹ ಖಾತೆ ರಾಜ್ಯ ಸಚಿವರ ನಡೆಯಿಂದಾಗಿ ಈ ಘಟನೆ ನಡೆಯಿದೆ ಎಂದು ಉವೈಸಿ ಮಾಧ್ಯಮಕ್ಕೆ ತಿಳಿಸಿದರು.
ಲಖಿಂಪುರ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಸಂಸದ ಅಸದುದ್ದೀನ್ ಉವೈಸಿ ಒತ್ತಾಯಿಸಿದ್ದಾರೆ