Home ಟಾಪ್ ಸುದ್ದಿಗಳು ಆಶಿಶ್ ಮಿಶ್ರಾ ವಿಚಾರಣೆಗೆ ಸಹಕರಿಸುತ್ತಿಲ್ಲ: ಉತ್ತರ ಪ್ರದೇಶ ಪೊಲೀಸರ ಅಳಲು

ಆಶಿಶ್ ಮಿಶ್ರಾ ವಿಚಾರಣೆಗೆ ಸಹಕರಿಸುತ್ತಿಲ್ಲ: ಉತ್ತರ ಪ್ರದೇಶ ಪೊಲೀಸರ ಅಳಲು

ಲಕ್ನೋ: ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮುಶ್ರಾ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆಶಿಶ್ ಮಿಶ್ರಾ ಅವರನ್ನು ನಿನ್ನೆ ವಿಚಾರಣೆಗೆ ಒಳಪಡಿಸಿದ ಬಳಿಕ ರಾತ್ರಿ ಅಧಿಕೃತವಾಗಿ ಬಂಧಿಸಲಾಗಿತ್ತು.

ಲಖಿಂಪುರ ಖೇರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದ ಬಳಿಕ ಮಿಶ್ರಾ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆದಿದ್ದರು. ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಬಂಧನವನ್ನು ಅಧಿಕೃತಗೊಳಿಸಿದರು.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಮಿಶ್ರಾ ಅವರ ವಾಹನವನ್ನು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿತ್ತು. ಬಳಿಕ ನಡೆದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದರು.

Join Whatsapp
Exit mobile version