ನಾನು ಬಿಡಲು ಬಯಸಿದರೂ ಮುಖ್ಯಮಂತ್ರಿ ಸ್ಥಾನ ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್

Prasthutha|

ಜೈಪುರ: ನಾನು ಮುಖ್ಯಮಂತ್ರಿ ಸ್ಥಾನವನ್ನು ತೊರೆಯಲು ಬಯಸುತ್ತಿದ್ದೇನೆ, ಆದರೆ “ಆ ಹುದ್ದೆಯು ನನ್ನನ್ನು ಹೋಗಲು ಬಿಡುವುದಿಲ್ಲ” ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

- Advertisement -


ದೆಹಲಿಯಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, ಮಹಿಳಾ ಬೆಂಬಲಿಗರೊಬ್ಬರು ತಾವು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದೀರಾ ಎಂದು ಕೇಳಿದ್ದಾರೆ.

ಇದಕ್ಕೆ ನಾನು, ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಲು ಬಯಸುತ್ತೇನೆ, ಆದರೆ ಈ ಹುದ್ದೆಯು ನನ್ನನ್ನು ಹೋಗಲು ಬಿಡುತ್ತಿಲ್ಲ ಎಂದು ಉತ್ತರಿಸಿದೆ ಎಂದಿದ್ದಾರೆ. 2023ರ ರಾಜಸ್ಥಾನ ವಿಧಾನಸಭಾ ಚುನಾವಣೆಯ ಸಮರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ಮುಂದಿನ ಸಿಎಂ ಅಭ್ಯರ್ಥಿಯ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ. ಈ ಬೆನ್ನಲ್ಲೇ ಸಿಎಂ ಅಶೋಕ್ ಗೆಹ್ಲೋಟ್ ಅವರ ಹೇಳಿಕೆಯೊಂದು ರಾಜಕೀಯ ಬಿಸಿ ಹೆಚ್ಚಿಸಿದೆ.