Home ಟಾಪ್ ಸುದ್ದಿಗಳು ನಾನು ಬಿಡಲು ಬಯಸಿದರೂ ಮುಖ್ಯಮಂತ್ರಿ ಸ್ಥಾನ ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್

ನಾನು ಬಿಡಲು ಬಯಸಿದರೂ ಮುಖ್ಯಮಂತ್ರಿ ಸ್ಥಾನ ನನ್ನನ್ನು ಬಿಡುತ್ತಿಲ್ಲ: ಅಶೋಕ್ ಗೆಹ್ಲೋಟ್

ಜೈಪುರ: ನಾನು ಮುಖ್ಯಮಂತ್ರಿ ಸ್ಥಾನವನ್ನು ತೊರೆಯಲು ಬಯಸುತ್ತಿದ್ದೇನೆ, ಆದರೆ “ಆ ಹುದ್ದೆಯು ನನ್ನನ್ನು ಹೋಗಲು ಬಿಡುವುದಿಲ್ಲ” ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.


ದೆಹಲಿಯಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, ಮಹಿಳಾ ಬೆಂಬಲಿಗರೊಬ್ಬರು ತಾವು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದೀರಾ ಎಂದು ಕೇಳಿದ್ದಾರೆ.

ಇದಕ್ಕೆ ನಾನು, ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಲು ಬಯಸುತ್ತೇನೆ, ಆದರೆ ಈ ಹುದ್ದೆಯು ನನ್ನನ್ನು ಹೋಗಲು ಬಿಡುತ್ತಿಲ್ಲ ಎಂದು ಉತ್ತರಿಸಿದೆ ಎಂದಿದ್ದಾರೆ. 2023ರ ರಾಜಸ್ಥಾನ ವಿಧಾನಸಭಾ ಚುನಾವಣೆಯ ಸಮರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ಮುಂದಿನ ಸಿಎಂ ಅಭ್ಯರ್ಥಿಯ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ. ಈ ಬೆನ್ನಲ್ಲೇ ಸಿಎಂ ಅಶೋಕ್ ಗೆಹ್ಲೋಟ್ ಅವರ ಹೇಳಿಕೆಯೊಂದು ರಾಜಕೀಯ ಬಿಸಿ ಹೆಚ್ಚಿಸಿದೆ.

Join Whatsapp
Exit mobile version