ಹರಿಯಾಣದಲ್ಲಿ ಬಿಜೆಪಿಗೆ ದೊಡ್ಡ ಶಾಕ್: ಅಶೋಕ್ ತನ್ವಾರ್ ಕಾಂಗ್ರೆಸ್ ಸೇರ್ಪಡೆ

Prasthutha|

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಎರಡೇ ದಿನ ಬಾಕಿಯಿದೆ. ಚುನಾವಣೆಗೂ ಮೊದಲೇ ಬಿಜೆಪಿ ಭಾರೀ ಹಿನ್ನಡೆಯಾಗಿದ್ದು, ಬಿಜೆಪಿ ನಾಯಕ ಅಶೋಕ್ ತನ್ವಾರ್ ತಮ್ಮ ಪಕ್ಷವನ್ನು ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

- Advertisement -


ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಪಕ್ಷದ ಶಾಲು ನೀಡುವ ಮೂಲಕ ಅಶೋಕ್ ತನ್ವಾರ್ ಅವರನ್ನು ಪಕ್ಷಕ್ಕೆ ಮರಳಿ ಬರಮಾಡಿಕೊಂಡರು.


ಚುನಾವಣೆಯ ಅಂತಿಮ ಸಿದ್ಧತೆಯಲ್ಲಿರುವ ಬಿಜೆಪಿಗೆ ಶಾಕ್ ನೀಡಿರುವ ಅಶೋಕ್ ತನ್ವಾರ್ ನಾಟಕೀಯ ತಿರುವಿನಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಿನ್ನೆಯಷ್ಟೇ ಮಧ್ಯಾಹ್ನ 1.45 ಕ್ಕೆ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಅವರು ಆ ಬಗ್ಗೆ ಟ್ವೀಟ್ ಮಾಡಿದ್ದರು. ಇಂದು ಇದ್ದಕ್ಕಿದ್ದಂತೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇಂದು ಅಶೋಕ್ ತನ್ವಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.



Join Whatsapp