ನವದೆಹಲಿ: ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನಾಯಕತ್ವದ ವಿರುದ್ಧ ಹೇಳಿಕೆ ನೀಡಿರುವ ಮಾಜಿ ಕಾಂಗ್ರೆಸ್ ನಾಯಕ ಅಶ್ವನಿ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, “ರಾಜ್ಯಸಭಾ ಸ್ಥಾನದ ಮಹತ್ವಾಕಾಂಕ್ಷೆಯು ಜನರನ್ನು ಅನೇಕ ಕೆಲಸಗಳನ್ನು ಮಾಡುವಂತೆ ಪ್ರೇರೇಪಿಸುತ್ತದೆ” ಎಂದು ತಿರುಗೇಟು ನೀಡಿದ್ದಾರೆ.
ಪಕ್ಷದೊಂದಿಗಿನ 46 ವರ್ಷಗಳ ಒಡನಾಟವನ್ನು ಕೊನೆಗೊಳಿಸಿದ ಕಾಂಗ್ರೆಸ್ ಹಿರಿಯ ನಾಯಕ ಅಶ್ವನಿ ಕುಮಾರ್ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು.