Home ಟಾಪ್ ಸುದ್ದಿಗಳು ಸಿಎಂ ಪುತ್ರ ಯತೀಂದ್ರ ವಿರುದ್ಧ ಕ್ರಮಕ್ಕೆ ಅಶ್ವತ್ಥ ನಾರಾಯಣ ಆಗ್ರಹ

ಸಿಎಂ ಪುತ್ರ ಯತೀಂದ್ರ ವಿರುದ್ಧ ಕ್ರಮಕ್ಕೆ ಅಶ್ವತ್ಥ ನಾರಾಯಣ ಆಗ್ರಹ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ವೈರಲ್ ಆಗಿರುವ ವಿಡಿಯೋ ನಿದರ್ಶನವಾಗಿದ್ದು, ಕೂಡಲೇ ಯತೀಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಆಗ್ರಹಿಸಿದ್ದಾರೆ.


ಮಲ್ಲೇಶ್ವರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತ್ತೊಮ್ಮೆ ವೈ ಎಸ್ ಟಿ ಅನ್ನೋದು ಸುದ್ದಿಯಲ್ಲಿದೆ. ಚುನಾಯಿತ ಪ್ರತಿನಿಧಿ ಅಲ್ಲದವರ ಎಟಿಎಂ ಸರ್ಕಾರ ಆಗಿದೆ. ತಂದೆಯ ಹೆಸರಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದೆ. ಈ ರೀತಿಯ ವ್ಯವಸ್ಥೆಗೆ ಕಣ್ಣ ಮುಂದೆಯೇ ಸಾಕ್ಷಿ ಇದೆ. ಈ ಸಂಬಂಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾನೂನಿನ ಬಗ್ಗೆ ಮಾತನಾಡೋ ಸಿದ್ದರಾಮಯ್ಯ ಈಗ ಏನು ಹೇಳ್ತಾರೆ ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version