ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ತಂದೆ ರೇವನಾಥ್(78) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತನ್ನ ತಂದೆಯನ್ನು ಕಳೆದುಕೊಂಡ ಅಶ್ವಿನಿ ಅವರಿಗೆ ಪತಿಯ ಸಾವಿನ ನೋವು ಮಾಸುವ ಮುನ್ನವೇ ಮತ್ತೊಂದು ಆಘಾತ ಎದುರಾದಂತಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾಗಮನೆಯ ಮೂಲದವರಾದ ರೇವನಾಥ್, ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು.