ಕಾರವಾರ; ಗಣರಾಜ್ಯೋತ್ಸವದ ದಿನದಂದು ಕರ್ತವ್ಯದಲ್ಲಿದ್ದಾಗಲೇ ಕಾರವಾರದ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಅಬ್ದುಲ್ ಖಾದರ್ ಮುಹಮ್ಮದ್ ಶೇಖ್ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ
ಗಣರಾಜ್ಯೋತ್ಸವ ಆಚರಣೆ ವೇಳೆ ಬೆಳಗ್ಗೆ ಕರ್ತವ್ಯ ನಿರ್ವಹಣೆಯಲ್ಲಿದ್ದ ವೇಳೆ ಮುಹಮ್ಮದ್ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮುಹಮ್ಮದ್ ಶೇಖ್2019 ರಲ್ಲಿ ಎಎಸ್ಐ ಆಗಿ ಪದೊನ್ನತಿ ಹೊಂದಿ ಕಾರವಾರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
1964 ರಂದು ಕಾರವಾರದಲ್ಲಿ ಜನಿಸಿದ ಮುಹಮ್ಮದ್, 1992 ರಲ್ಲಿ ಪೊಲೀಸ್ ಕಾನಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕುಮಟಾ , ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.