ಏಷ್ಯಾಕಪ್ 2023: ನಾಳೆ ಭಾರತ-ಶ್ರೀಲಂಕಾ ಫೈನಲ್ ಹಣಾಹಣಿ

Prasthutha|

ಕೊಲಂಬೊ: ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ನಾಳೆ ಏಷ್ಯಾ ಕಪ್ ಫೈನಲ್‌ನಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ.

- Advertisement -

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ 8ನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಪಾರುಪತ್ಯ ಮೆರೆಯುತ್ತಾ ಬಂದಿದೆ.

ಏಷ್ಯಾಕಪ್​ನಲ್ಲಿ ಭಾರತ ಮತ್ತು ಶ್ರೀಲಂಕಾ 8 ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು 5 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡವು 3 ಬಾರಿ ಟೀಮ್ ಇಂಡಿಯಾಗೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಅಂಕಿ ಅಂಶಗಳ ಪ್ರಕಾರ ಲಂಕಾ ತಂಡದಿಂದ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪೈಪೋಟಿ ಎದುರಾಗಬಹುದು.

- Advertisement -

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ದುನಿತ್ ವೆಲ್ಲಾಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

Join Whatsapp