ನವದೆಹಲಿ: ಏಷ್ಯಾಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಶ್ರೀಲಂಕಾ ತಂಡದ ಇಬ್ಬರು ಪ್ರಮುಖ ಆಟಗಾರರು ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಶ್ರೀಲಂಕಾ ತಂಡದ ಆರಂಭಿಕ ಬ್ಯಾಟರ್ ಅವಿಷ್ಕಾ ಫರ್ನಾಂಡೋ ಮತ್ತು ವಿಕೆಟ್ ಕೀಪರ್ ಕುಸಾಲ್ ಪೆರೆರಾ ಇಬ್ಬರೂ ಕೊರೊನಾ ಸೋಂಕಿಗೆ ತುತ್ತಾಗಿರುವ ಆಟಗಾರರಾಗಿದ್ದಾರೆ.
ಈ ಬಾರಿಯ ಏಷ್ಯಾಕಪ್ ಗೆ ಪಾಕಿಸ್ತಾನ ಹಾಗೂ ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಹದಗೆಟ್ಟ ಸಂಬಂಧದಿಂದಾಗಿ ಈ ಬಾರಿಯ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ. ಇದರ ಪ್ರಕಾರ ಕೇವಲ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯ ಸೇರಿದಂತೆ ಪ್ರಮುಖ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲ್ಲಿವೆ.