ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆಯ 2024-2027 ರ ಅವಧಿಯ ನೂತನ ಅಧ್ಯಕ್ಷರಾಗಿ ಆಸಿಫ್ ಕೋಟೇಶ್ವರ, ಉಪಾಧ್ಯಕ್ಷರುಗಳಾಗಿ ನಝೀರ್ ಅಹಮದ್ ಹಾಗೂ ಹನೀಫ್ ಮೂಳೂರ್ ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ರಜಾಕ್ Y S ಹಾಗೂ ಶಂಶುದ್ದೀನ್, ಕಾರ್ಯದರ್ಶಿಯಾಗಿ ಮಹಮ್ಮದ್ ಅವೇಜ್, ಕೋಶಾಧಿಕಾರಿಯಾಗಿ ಅಬ್ದುಲ್ ಅಜೀಜ್ ಹಾಗೂ ಜಿಲ್ಲಾ ಸಮಿತಿ ಸದಸ್ಯರಾಗಿ ಸಾದಿಕ್ ಅಬು ಹಾಜಿ, ಸುಹೇಲ್ ಕಂಡ್ಲೂರ್, ಇಬ್ರಾಹಿಂ ಕಂಚಿನಡ್ಕ, ಮೊಹಮ್ಮದ್ ಶಫೀಕ್, ಅಬೂಬಕರ್ ಸಿದ್ದಿಕ್ ಮತ್ತು ನಸೀಮಾ ರವರು ಆಯ್ಕೆಯಾದರು.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದ ಜಿಲ್ಲಾ ಪ್ರತಿನಿಧಿ ಸಭೆಯಲ್ಲಿ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ರವರು ಉಡುಪಿ ಜಿಲ್ಲಾ ಸಮಿತಿಯ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಜಿಲ್ಲಾ ಪ್ರತಿನಿಧಿ ಸಭೆಯು ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ಲೀಮಾ ರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅತಿಥಿಯಾಗಿ ಆಗಮಿಸಿದ್ದರು.
ಸಭೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ಸಮಿತಿಗಳ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಶೇಷ ಆಹ್ವಾನಿತರು ಉಪಸ್ಥಿತರಿದ್ದರು.