ಕೋಳಿಯನ್ನು ಕೇಳಿ ಮಸಾಲೆ ಅರೆಯಲ್ಲ: ಬಿಜೆಪಿಗೆ ಡಿ.ಕೆ.ಶಿವಕುಮಾರ್ ಟಾಂಗ್

Prasthutha|

ಬೆಂಗಳೂರು: ನಾವು ಕೋಳಿಯನ್ನು ಕೇಳಿ ಮಸಾಲೆ ಅರಿಯಬೇಕಾ? ಮಸಾಲೆ ಅರೆಯಲು ನಾವು ಯಾವ ಕೋಳಿಯನ್ನೂ ಕೇಳುವುದಿಲ್ಲ. ಆಪರೇಷನ್ ಕಮಲ ಮಾಡಿದಾಗ ಏನಾಗಿತ್ತು?, ಜನತಾದಳದ ಶಾಸಕರನ್ನು, ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಮಜಾ ಮಾಡಿದ್ದರಲ್ಲ ಆಗ ಏನಾಗಿತ್ತು? ಎಂದು ಸಿ.ಟಿ.ರವಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

- Advertisement -

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್ ಶಿವಮೊಗ್ಗ ನಾಯಕರ ಜೊತೆ ಮಾತುಕತೆ ನಡೆಸಿ ಒಪ್ಪಿಗೆ ಪಡೆದ ನಂತರ ಡಿ.ಕೆ.ಶಿವಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿದರು.

ಅವರವರ ಬದುಕು, ಅವರವರ ಭವಿಷ್ಯ, ಅವರವರು ನೋಡಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಸೇರ್ಪಡೆ ಹಾಗೂ ಬಿಜೆಪಿಯ ಕೆಲ ಸ್ಥಳೀಯ ನಾಯಕರ ಕಾಂಗ್ರೆಸ್ ಸೇರ್ಪಡೆ ನಿರ್ಧಾರವನ್ನು ಸಮರ್ಥಿಸಿಕೊಂಡರು.

Join Whatsapp