ಅಸ್ಸಾಂ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೃತದೇಹ ಕೆರೆಯಲ್ಲಿ ಪತ್ತೆ

Prasthutha|

ನಾಗಾಂವ್: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಪೊಲೀಸ್ ವಶದಿಂದ ತಪ್ಪಿಸಿಕೊಂಡು, ಕೆರೆಗೆ ಹಾರಿ ಸಾವಿಗೀಡಾದ ಘಟನೆ ಅಸ್ಸಾಂನ ನಗೋನ್ ಜಿಲ್ಲೆಯ ದಿಂಗ್ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿತ್ತು. ಪ್ರಕರಣದ ಮರುಸೃಷ್ಠಿಗೆ ಆತನನ್ನು ಶನಿವಾರ ಮುಂಜಾನೆ 3.30ಕ್ಕೆ ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು.
‘ಪೊಲೀಸ್ ವಶದಿಂದ ಆರೋಪಿ ತಪ್ಪಿಸಿಕೊಂಡ ಆರೋಪಿ ಕೆರೆಗೆ ಹಾರಿದ್ದಾನೆ. ತಕ್ಷಣವೇ ಆತನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸುಮಾರು ಎರಡು ತಾಸಿನ ಬಳಿಕ ಮೃತದೇಹ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 22 ರಂದು ಸಂಜೆ ಟ್ಯೂಷನ್ ತರಗತಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯು ಧಿಂಗ್ ಪ್ರದೇಶದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಯಿತು, ಅಲ್ಲಿ ಸ್ಥಳೀಯರು ಮತ್ತು ವಿವಿಧ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತನಿಖೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.



Join Whatsapp