‘ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯವಿಲ್ಲ’ : ಅಸ್ಸಾಂ ಸರ್ಕಾರ ನಿರ್ಧಾರ

Prasthutha|

ಗುವಾಹಟಿ : ರಾಜ್ಯದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ನೀಡದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದ್ದು, ಜನಸಂಖ್ಯೆ ನಿಯಂತ್ರಣದ ಭಾಗವಾಗಿ ಕುಟುಂಬ ಯೋಜನಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಚಿಂತನೆ ನಡೆಸಿದೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ‘ಜನಸಂಖ್ಯೆ ನಿಯಂತ್ರಣದ ಭಾಗವಾಗಿ ರಾಜ್ಯದಲ್ಲಿ ಕುಟುಂಬ ಯೋಜನಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದ್ದು, ಕೇಂದ್ರ-ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಎರಡು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಮಾತ್ರ ನೀಡಲು ಸರ್ಕಾರ ನಿರ್ಧರಿಸಿದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರನ್ನು ಸೌಲಭ್ಯಗಳಿಗೆ ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ.

ಜನಸಂಖ್ಯೆ ನಿಯಂತ್ರಣಕ್ಕಾಗಿ ಕುಟುಂಬ ಯೋಜನಾ ನೀತಿಯನ್ನು ಜೂನ್ ಮೊದಲ ವಾರದಲ್ಲಿ ಜಾರಿಗೆ ತರಲಾಗುವುದು ಎಂದು ಹಿಮಂತಾ ಬಿಸ್ವಾ ಶರ್ಮಾ ಈ ವೇಳೆ ಘೋಷಿಸಿದ್ದಾರೆ. ಇದಕ್ಕಾಗಿ ಅವರು ಕುಟುಂಬ ಯೋಜನಾ ನೀತಿಯನ್ನು ಪಾಲಿಸಲು ಅಲ್ಪಸಂಖ್ಯಾತರಿಗೆ ಈ ಹಿಂದೆ ಮನವಿ ಮಾಡಿದ್ದರು. ಇದೀಗ ಸರ್ಕಾರವು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸೌಲಭ್ಯ ನೀಡದಿರಲು ನಿರ್ಧರಿಸಿದೆ.

Join Whatsapp