ಗುವಾಹಟಿ: ಅಸ್ಸಾಂ ನ ದಲ್ ಪುರ ದಲ್ಲಿ ಪೊಲೀಸರು ನಡೆಸಿದ ಶೂಟೌಟ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಅಸ್ಸಾಂ ಜನತೆಯನ್ನು ಒಕ್ಕಲೆಬ್ಬಿಸುವ ನೆಪದಲ್ಲಿ ಅಸ್ಸಾಂ ಪೊಲೀಸರು ಗುಂಡಿನ ದಾಳಿ ನಡೆಸಿ ಇಬ್ಬರು ಮುಸ್ಲಿಮರನ್ನು ಹತ್ಯೆ ನಡೆಸಿದ್ದರು.
ಪ್ರಸಕ್ತ ಘಟನೆಯ ಹಿನ್ನೆಲೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ ಅಸ್ಸಾಂ ಸರ್ಕಾರ, ಮುಂದಿನ ವಿಚಾರಣೆಯನ್ನು ಗೌಹಾಟಿ ಹೈಕೋರ್ಟ್ ನ ನಿವೃತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತನಿಖೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ದರ್ರಾಂಗ್ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ್ ಬಿಶ್ವ ಶರ್ಮಾ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ, ಪ್ರತಿಭಟನಾ ನಿರತ ಜನರು ಪೊಲೀಸರ ವಿರುದ್ಧ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಿಂದ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.