ಮುಸ್ಲಿಂ ಮರುವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಅಸ್ಸಾಂ ಸರ್ಕಾರ ನಿರ್ಧಾರ

Prasthutha|

ಗುವಾಹಟಿ: ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರ ರದ್ದುಗೊಳಿಸಲು ನಿರ್ಧರಿಸಿದೆ.

- Advertisement -


ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಜಯಂತ್ ಮಲ್ಲಬರುವ, ಮುಸ್ಲಿಂ ವಿವಾಹ ಕಾಯ್ದೆ ರದ್ದತಿ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು. ಏಕರೂಪ ನಾಗರಿಕ ಸಂಹಿತೆ ನಿಟ್ಟಿನಲ್ಲಿ ಇದೊಂದು ದೊಡ್ಡ ಹೆಜ್ಜೆ. ಇನ್ನು ಮುಂದೆ ರಾಜ್ಯದಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿಯನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ನೋಂದಣಾಧಿಕಾರಿಗಳು ಮಾಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.


ಇಂದಿನ ನಿರ್ಧಾರದ ಪರಿಣಾಮವಾಗಿ ಮುಸ್ಲಿಂ ವ್ಯಕ್ತಿಗಳು ತಮ್ಮ ವಿವಾಹ ಹಾಗೂ ನೋಂದಣಿಯನ್ನು ಈ ಕಾಯ್ದೆಯಡಿ ನೋಂದಾಯಿಸಲು ಸಾಧ್ಯವಾಗುವುದಿಲ್ಲ. ಈಗಾಗಲೇ ನಾವು ವಿಶೇಷ ವಿವಾಹ ಕಾಯ್ದೆಯನ್ನು ಜಾರಿಗೆ ತಂದಿದ್ದು, ಆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲೇ ವಿವಾಹಗಳನ್ನು ನೋಂದಣಿ ಮಾಡಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



Join Whatsapp