Home ಟಾಪ್ ಸುದ್ದಿಗಳು ಅಸ್ಸಾಮ್ ನಲ್ಲಿ ಮತ್ತಿಬ್ಬರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರು

ಅಸ್ಸಾಮ್ ನಲ್ಲಿ ಮತ್ತಿಬ್ಬರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರು

ಗುವಾಹಟಿ: ಅಸ್ಸಾಮ್ ನಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ.

ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಬಂಧಿತರು, ಶನಿವಾರ ರಾತ್ರಿ ಪೊಲೀಸ್ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಇಬ್ಬರಲ್ಲಿ ಒಬ್ಬನಾದ ಕಮ್ರುಲ್ ಇಸ್ಲಾಂ ಜಿಲ್ಲೆಯ ‘ಮೋಸ್ಟ್ ವಾಂಟೆಡ್ ವ್ಯಕ್ತಿಗಳ’ ಪಟ್ಟಿಯಲ್ಲಿದ್ದ. ಸುಲಿಗೆ, ಅಪಹರಣ, ಡಕಾಯಿತಿ ಮತ್ತು ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಲ್ಲದೆ ಮತ್ತೊಬ್ಬ ಅಮ್ರುಲ್ ಹುಸೇನ್ ಕೂಡ ಡಕಾಯಿತಿ ಪ್ರಕರಣಗಳಲ್ಲಿ ಬೇಕಾಗಿದ್ದ ಎಂದು ಕಚಾರ್ ಪೊಲೀಸ್ ವರಿಷ್ಠಾಧಿಕಾರಿ ರಮಣದೀಪ್ ಕೌರ್ ತಿಳಿಸಿದ್ದಾರೆ.

ಗುಂಡು ಹಾರಿಸಿದ ನಂತರ ಇಬ್ಬರನ್ನು ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಅವರನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಎಸ್ಪಿ ತಿಳಿಸಿದ್ದಾರೆ.

Join Whatsapp
Exit mobile version