2041ರ ವೇಳೆಗೆ ಅಸ್ಸಾಂ ಮುಸ್ಲಿಂ ಪ್ರಾಬಲ್ಯದ ರಾಜ್ಯವಾಗಲಿದೆ: ಸಿಎಂ ಹಿಮಂತ ಬಿಸ್ವ ಶರ್ಮಾ

Prasthutha|

ನವದೆಹಲಿ: ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯು ಪ್ರತಿ 10 ವರ್ಷಗಳಿಗೊಮ್ಮೆ ಶೇ. 30ರಷ್ಟು ಬೆಳೆಯುತ್ತಿದೆ. ಇದರಿಂದಾಗಿ 2041ರ ವೇಳೆಗೆ ಅಸ್ಸಾಂನಲ್ಲಿ ಮುಸ್ಲಿಮರೇ ಬಹುಸಂಖ್ಯಾತರಾಗುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

- Advertisement -


ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂಕಿಅಂಶಗಳ ಮಾದರಿಯ ಪ್ರಕಾರ ಮುಸ್ಲಿಮರು ಈಗ ಅಸ್ಸಾಂನ ಜನಸಂಖ್ಯೆಯ ಶೇ. 40ರಷ್ಟು ಆಗಿದ್ದಾರೆ ಎಂದು ಹೇಳಿದ್ದಾರೆ.


“2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ. ಎಂಬುದು ವಾಸ್ತವ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.
“ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆಯನ್ನು ತಡೆಯುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

- Advertisement -


ಅಸ್ಸಾಂ ಸರ್ಕಾರವು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ರದ್ದುಗೊಳಿಸುತ್ತದೆ. ಬಾಲ್ಯ ವಿವಾಹವನ್ನು ತಡೆಗಟ್ಟಲು ಮತ್ತು ವಿವಾಹ ಮತ್ತು ವಿಚ್ಛೇದನ ನೋಂದಣಿಯಲ್ಲಿ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು 1935ರ ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.



Join Whatsapp