ಫೆ.12ರಿಂದ ವಿಧಾನಸಭೆ ಬಜೆಟ್ ಅಧಿವೇಶನ, 16ಕ್ಕೆ ಬಜೆಟ್ ಮಂಡನೆ: ಸ್ಪೀಕರ್

Prasthutha|

ರಾಯಚೂರು: ಫೆಬ್ರುವರಿ 12ರಿಂದ 23ರವರೆಗೆ ವಿಧಾನಸಭೆ ಬಜೆಟ್ ಅಧಿವೇಶನ ನಡೆಯಲಿದ್ದು. ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.15 ರವರೆಗೆ ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಯಲಿದೆ. ಫೆ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

- Advertisement -

ಬಜೆಟ್ ಕುರಿತು ಮಾಹಿತಿ ಒದಗಿಸಲು ಎಲ್ಲ ಶಾಸಕರಿಗೆ ಫೆ.9ರಂದು ಬೆಂಗಳೂರಿನ ಹೋಟೆಲ್ ಕ್ಯಾಪಿಟಲ್‌ನಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಖಾದರ್ ಹೇಳಿದ್ದಾರೆ.

ಬಜೆಟ್ ಹೇಗೆ ರೂಪಿಸಲಾಗುತ್ತದೆ, ಯಾವ ಯಾವ ಇಲಾಖೆಗೆ ಹೇಗೆ ಅನುದಾನ ಮೀಸಲಿಡಲಾಗುತ್ತದೆ. ಇಲಾಖೆಗಳ ಕಾರ್ಯನಿರ್ವಹಣೆ ಹೇಗಿರುತ್ತದೆ ಎನ್ನುವುದರ ಕುರಿತಾಗಿ ಶಾಸಕರಿಗೆ ಮಾಹಿತಿ ಒದಗಿಸಲಾಗುವುದು. ಇದರ ಜೊತೆಗೆ ಪತ್ರಕರ್ತರಿಗೂ ಸಹ ಪ್ರತ್ಯೇಕವಾಗಿ ತರಬೇತಿ ಕಾರ್ಯಾಗಾರ ನಡೆಸಲಾಗುವುದು ಎಂದು ಸ್ಪೀಕರ್ ತಿಳಿಸಿದರು.

- Advertisement -

ರಾಜ್ಯದ ವಿಧಾನಸಭೆಯನ್ನು ಜನರ ಬಳಿ ಒಯ್ಯಬೇಕು, ಸಮಾಜದ ಕಟ್ಟಕಡೆಯ ಜನ ವಿಧಾನಸಭೆ ನಾನು ನೋಡುವಂತದ್ದಲ್ಲ ಎಂದು ಭಾವಿಸಬಾರದು. ಸುರಕ್ಷತಾ ದೃಷ್ಠಿಯಿಂದ ಯಾರು ಬರುತ್ತಾರೆ ಹೋಗುತ್ತಾರೆ ಎನ್ನುವುದರ ಬಗ್ಗೆ ಮಾಹಿತಿ ಬೇಕು. ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಹಾಗೂ ಇತರೆ ರಕ್ಷಣಾ ವ್ಯವಸ್ಥೆಯನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

ತಲಾ ಒಂದು ದಿನ ತಳಮಟ್ಟದ ಕೂಲಿ ಕಾರ್ಮಿಕರು, ಪೌರಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಕರು, ಕ್ರೀಡಾಪಟುಗಳು ಸೇರಿದಂತೆ ಸಮಾಜದ ಎಲ್ಲ ವರ್ಗದವರಿಗೆ ಒಂದು ದಿನ ಅಧಿವೇಶನ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು. ಒಟ್ಟಿನಲ್ಲಿ ವಿಧಾನಸೌಧ ರಾಜ್ಯದ ಎಲ್ಲ ಸಮುದಾಯಗಳ, ಪ್ರತಿಯೊಬ್ಬರ ವಿಧಾನಸಭೆಯಾಗಬೇಕು ಎನ್ನುವ ಆಶಯವನ್ನು ಹೊಂದಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ಯುಟಿ‌ ಖಾಸರ್ ತಿಳಿಸಿದರು.

ಅಧಿವೇಶನ ನೋಡಲು ಬರುವ ವಿದ್ಯಾರ್ಥಿಗಳನ್ನು ವಿಧಾನಸಭೆ ಹೊರಗಡೆ ಮಳೆ-ಬಿಸಿಲಿಗೆ ಸಾಲಲ್ಲಿ ನಿಲ್ಲಿಸಲಾಗುತ್ತಿದೆ. ಬೆಳಗ್ಗೆ 8 ಗಂಟೆಗೆ ಬಂದ ವಿದ್ಯಾರ್ಥಿಗಳನ್ನು ಅಧಿವೇಶನ ಶುರುವಾಗುವ ವರೆಗೆ ಒಳಗಡೆ ಬಿಡುವುದಿಲ್ಲ ಇದರಿಂದಾಗಿ ಮಕ್ಕಳು ಬಿಸಿಲಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ಇದೀಗ ಯಾವುದೇ ಶಾಲೆ ಮಕ್ಕಳು ಬಂದರೂ ಅವರನ್ನು ಹೊರಗಡೆ ಸಾಲಲ್ಲಿ ನಿಲ್ಲಿಸದೇ ಒಳಗಡೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.



Join Whatsapp