ವಿಧಾನಸಭಾ ಚುನಾವಣೆ| ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ – ಎಸ್.ಡಿ.ಪಿ.ಐ ಅಭ್ಯರ್ಥಿ ಘೋಷಣೆಗೆ ಪೂರ್ವ ತಯಾರಿ

Prasthutha|

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿ ಸಭೆಯು ಅಡ್ಡೂರಿನಲ್ಲಿ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ನೇತೃತ್ವದಲ್ಲಿ ನಡೆಯಿತು.

ಮುಂಬರುವ ವಿಧಾನಸಭಾ ಚುನಾವಣೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ
ಅಭ್ಯರ್ಥಿ ಘೋಷಣೆಯ ಕಾರ್ಯಯೋಜನೆಗಳನ್ನು ರೂಪಿಸಿಕೊಳ್ಳಲಾಯಿತು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವಂತೆ ಈ ಸಂದರ್ಭದಲ್ಲಿ ಅಶ್ರಫ್ ಮಾಚಾರ್ ಕರೆ ನೀಡಿದರು.

- Advertisement -

ಸಭೆಯಲ್ಲಿ ದ.ಕ ಜಿಲ್ಲೆಯ ಪಕ್ಷ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ರಫ್ ಅಡ್ಡೂರ್, ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಉಸ್ಮಾನ್ ಗುರುಪುರ ಹಾಗೂ ಕ್ಷೇತ್ರ ವ್ಯಾಪ್ತಿಯ ನಾಯಕರು ಉಪಸ್ಥಿತರಿದ್ದರು.

- Advertisement -