ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈ ಬಾರಿ ಅಭ್ಯರ್ಥಿಯಾಗಬಯಸುವವರು ಅರ್ಜಿ ಸಲ್ಲಿಸಬೇಕು ಎಂಬ ಕಾಂಗ್ರೆಸ್’ನ ಹೊಸ ನೀತಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದುವರೆಗೆ 224 ಕ್ಷೇತ್ರಗಳಿಗೆ 1120 ಅರ್ಜಿಗಳು ಸಲ್ಲಿಕೆಯಾಗಿವೆ.
ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಕೆಗೆ ಸೋಮವಾರ ಕೊನೆಯ ದಿನವಾಗಿದೆ.
ಕಾಂಗ್ರೆಸ್ ಟಿಕೆಟ್’ ಗಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಲೇ ಇದ್ದು ಈವರೆಗೆ ಕೆಪಿಸಿಸಿಗೆ ಸುಮಾರು 1120ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಟಿಕೆಟ್ ಗಾಗಿ ಅರ್ಜಿ ಸಲ್ಲಿಸಬಯಸುವವರು 2 ಲಕ್ಷ ಡಿಡಿ ಹಾಗೂ ಎಸ್ಸಿ ಮತ್ತು ಎಸ್.ಟಿಗೆ 1 ಲಕ್ಷ ಡಿಡಿ ನಿಗದಿ ಮಾಡಲಾಗಿದೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಅರ್ಜಿ ಸಲ್ಲಿಸಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಈವರೆಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಸಂಜೆಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.