ನವದೆಹಲಿ: ಇಂದು ಛತ್ತೀಸ್ ಗಢ ಹಾಗೂ ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ.
ಛತ್ತೀಸ್ ಗಢದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಮತದಾನ ಶುರುವಾಗಿದೆ. ಇದಾದ ನಂತರ ನವೆಂಬರ್ 17 ರಂದು ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಮತದಾನ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಮಧ್ಯಾಹ್ನ 3ರವರೆಗೆ 10 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 10 ಕ್ಷೇತ್ರಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಭದ್ರತಾ ದೃಷ್ಟಿಯಿಂದ ಚುನಾವಣಾ ಆಯೋಗವು ಛತ್ತೀಸ್ ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಿದೆ.
ಈ ಬಾರಿಯ ವಿಧಾನಸಭಾ ಚುನಾವಣೆ ಹಲವು ರೀತಿಯಲ್ಲಿ ವಿಶೇಷವಾಗಿದೆ. ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದಾಗಿ ಕಾಂಗ್ರೆಸ್ ಹೇಳುತ್ತಿದ್ದರೆ, ಬಿಜೆಪಿ ಕಾಂಗ್ರೆಸ್ ಅನ್ನು ಸೋಲಿಸಲು ತನ್ನ ಹಲವು ಸಂಸದರನ್ನು ಕಣಕ್ಕಿಳಿಸಿದೆ.