ಹರಿಯಾಣ, ಜಮ್ಮು ಕಾಶ್ಮೀರ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

Prasthutha|

ಹೊಸದಿಲ್ಲಿ: ಚುನಾವಣಾ ಆಯೋಗವು ಇಂದು ಜಮ್ಮು & ಕಾಶ್ಮೀರ, ಹರ್ಯಾಣ ರಾಜ್ಯಗಳ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದೆ.

- Advertisement -


ಹರ್ಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅ.4 ರಂದು ಮತಎಣಿಕೆ ನಡೆಯಲಿದೆ.


ಜಮ್ಮು & ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಸೆ.18 ರಂದು ಮೊದಲ ಹಂತ, ಸೆ.25 ರಂದು ಎರಡನೇ ಹಂತ, ಅ.1 ರಂದು ಮೂರನೆ ಹಂತದಲ್ಲಿ ಮತದಾನ ನಡೆಯಲಿದೆ. ಅ.4 ರಂದು ಮತಎಣಿಕೆ ನಡೆಯಲಿದೆ.

- Advertisement -


ಚುನಾವಣಾ ಸಿದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಚುನಾವಣಾ ಆಯೋಗವು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣಕ್ಕೆ ಭೇಟಿ ನೀಡಿತ್ತು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಜಮ್ಮು ಕಾಶ್ಮೀರದ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 90. ಜಮ್ಮು ಕಾಶ್ಮೀರದಲ್ಲಿ ಒಟ್ಟು 87.09 ಲಕ್ಷ ಮತದಾರರಿದ್ದಾರೆ. ಜಮ್ಮು ಕಾಶ್ಮೀರದಲ್ಲಿನ ಒಟ್ಟು ಮತಗಟ್ಟೆಗಳ ಸಂಖ್ಯೆ 11,838 ಎಂದಿದ್ದಾರೆ.


ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯು 90 ಸ್ಥಾನಗಳಿಗೆ ನಡೆಯಲಿದೆ, ಅದರಲ್ಲಿ 73 ಸಾಮಾನ್ಯ ಮತ್ತು 17 ಪರಿಶಿಷ್ಟ ಜಾತಿಗಳಿಗೆ (SC) ಮೀಸಲಾಗಿದೆ. 87 ಲಕ್ಷಕ್ಕೂ ಹೆಚ್ಚು ಮತದಾರರು ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅಂತಿಮ ಮತದಾರರ ಪಟ್ಟಿಯನ್ನು ಆಗಸ್ಟ್ 20ರಂದು ಪ್ರಕಟಿಸಲಾಗುವುದು. ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ ಎಂದು ಸಿಇಸಿ ತಿಳಿಸಿದೆ, ಈ ಪೈಕಿ 74 ಸಾಮಾನ್ಯ ಮತ್ತು 16 ಮೀಸಲು (ಎಸ್ಟಿ – 9, ಎಸ್ಸಿ – 7) ಇದೆ.



Join Whatsapp