Home ಕರಾವಳಿ ವಿಧಾನಸಭಾ ಚುನಾವಣೆ ಹಿನ್ನೆಲೆ: ಮಂಗಳೂರು ನಗರದಲ್ಲಿ ಪಥ ಸಂಚಲನ

ವಿಧಾನಸಭಾ ಚುನಾವಣೆ ಹಿನ್ನೆಲೆ: ಮಂಗಳೂರು ನಗರದಲ್ಲಿ ಪಥ ಸಂಚಲನ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ನಾಗರಿಕರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಪಥ ಸಂಚಲನ ನಡೆಯಿತು.


ಸಿಆರ್ ಪಿಎಫ್, ಸಿಐಎಸ್ ಎಫ್, ಸಿಎಆರ್, ಸ್ಥಳೀಯ ಪೊಲೀಸರ ಸಹಿತ 280 ಮಂದಿ ಅಧಿಕಾರಿ, ಸಿಬ್ಬಂದಿಗಳಿಂದ ನಗರದ ನೆಹರೂ ಮೈದಾನದಿಂದ ಆರಂಭಗೊಂಡ ಪಥಸಂಚಲನ ಹ್ಯಾಮಿಲ್ಟನ್ ಸರ್ಕಲ್, ರಾವ್ ಆ್ಯಂಡ್ ರಾವ್ ಸರ್ಕಲ್, ಕ್ಲಾಕ್ ಟವರ್, ಕೆ.ಎಸ್.ರಾವ್ ರಸ್ತೆಯ ಮೂಲಕ ಮಂಜೇಶ್ವರ ಗೋವಿಂದ ಪೈ ವೃತ್ತದವರೆಗೆ ಸಾಗಿತ್ತು.

Join Whatsapp
Exit mobile version