ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023: SDPI ಅಭ್ಯರ್ಥಿಗಳ ಪ್ರಥಮ ಪಟ್ಟಿ ಜನವರಿ 7ಕ್ಕೆ ಬಿಡುಗಡೆ

Prasthutha|


ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್’ಡಿಪಿಐ) ಪಕ್ಷ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಅಂತಿಮಗೊಳಿಸಿದ್ದು ಜನವರಿ 7ನೇ ತಾರೀಖಿನಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಪ್ರಕಟಿಸಲಿದ್ದಾರೆ ಎಂದು ಕಾರ್ಯದರ್ಶಿ ಮಂಡಳಿ ಸಭೆಯ ಬಳಿಕ ಎಸ್’ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ನೂತನ ರಾಜ್ಯ ಚುನಾವಣಾ ಉಸ್ತುವಾರಿಯೂ ಆಗಿರುವ ಅಫ್ಸರ್ ಕೊಡ್ಲಿಪೇಟೆ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -


ಪ್ರತೀ ವಿಧಾನಸಭಾ ಕ್ಷೇತ್ರದಿಂದ ಬಹಳಷ್ಟು ಅಭ್ಯರ್ಥಿಗಳ ಹೆಸರು ಸೂಚಿಸಲ್ಪಟ್ಟಿತ್ತು, ಅದರ ಪರಾಮರ್ಶೆ ನಡೆಸಿದ ಪಕ್ಷದ ರಾಜ್ಯ ಸಮಿತಿ ಪ್ರತೀ ವಿಧಾನಸಭಾ ಕ್ಷೇತ್ರದಿಂದ ಮೂರು ಅಭ್ಯರ್ಥಿಗಳ ಹೆಸರುಗಳನ್ನು ಪಟ್ಟಿ ಮಾಡಿ ಕೇಂದ್ರ ಸಮಿತಿಗೆ ಕಳುಹಿಸಿತ್ತು.


ಇತ್ತೀಚೆಗೆ ಜೈಪುರದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಈ ಪಟ್ಟಿಯ ಮೇಲೆ ವಿಸ್ತೃತ ಚರ್ಚೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಂತಿಮಗೊಳಿಸಲಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಅಧ್ಯಕ್ಷರು ಜನವರಿ 7ನೇ ತಾರೀಖು ಬಿಡುಗಡೆಗೊಳಿಸಲಿದ್ದಾರೆ ಎಂದು ಅಫ್ಸರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp