ಬೆಂಗಳೂರು: ಕರ್ನಾಟಕ ವಿಧಾನಸಭಾ ಅಧಿವೇಶನ ಸೆಪ್ಟಂಬರ್ 12ರಿಂದ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮ್ಮತಿ ನೀಡಿದ್ದಾರೆ.
ಸೆಪ್ಟಂಬರ್ 12ರಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಆರಂಭಗೊಳ್ಳಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿಧಾನಸಭಾ ಚುನಾವಣೆಗೆ ಕೇವಲ 8 ತಿಂಗಳು ಬಾಕಿ ಇರುವಾಗಲೇ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದ್ದು, ಅಧಿವೇಶನದಲ್ಲಿಯೂ ಇದು ಪ್ರತಿಧ್ವನಿಸುವ ಸಾಧ್ಯತೆ ಇದೆ.
ಕಾಮಗಾರಿಗಳಲ್ಲಿ ಶೇಕಡಾ 40 ಕಮಿಷನ್, ಕರಾವಳಿ ಜಿಲ್ಲೆಗಳಲ್ಲಿ ಸರಣಿ ಹತ್ಯೆ, ಪಠ್ಯಪುಸ್ತಕ ಪರಿಷ್ಕರಣೆ ಅವಾಂತರ, ಮಳೆ ಸಂತ್ರಸ್ತರ ಕಡೆಗಣನೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ, ಬಿಜೆಪಿ ನಾಯಕರ ದ್ವೇಷದ ಹೇಳಿಕೆ ಮತ್ತಿತರ ವಿಷಯಗಳನ್ನು ಮುಂದಿಟ್ಟು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ತಯಾರಿ ನಡೆಸಿದೆ.