ಮನಿಲಾ: ಫಿಲಿಪೈನ್ಸ್‌ನಲ್ಲಿ ಚಂಡಮಾರುತದ ಪರಿಣಾಮ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ದೇಶಾದ್ಯಂತ ವಿಮಾನಗಳ ಹಾರಾಟ ಹಾಗೂ ಹಡಗು ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಸಾವಿರಾರು ಜನ ಪ್ರಯಾಣಿಕರು ಪರದಾಡುತ್ತಿದ್ದಾರೆ.
ದೇಶದ ಯಾಗಿ ಇಲೋಕೋಸ್ ನಾರ್ಟೆ ಪ್ರಾಂತ್ಯದ ಪಾವೊಯ್ ನಗರ ಸೇರಿದಂತೆ ದಕ್ಷಿಣ ಚೀನಾ ಸಮುದ್ರದ ಭಾಗದಲ್ಲಿ ಗಂಟೆಗೆ 75-125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಮಳೆ ಹೆಚ್ಚಾಗುವ ಆತಂಕ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.